ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ದಿಢೀರ್ ಕುಸಿದು ಬಿದ್ದು ಸಾವು.

32

ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ ಎಂದು ತಿಳಿಯಲಾಗಿದ್ದು, ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆ ಬಾಲಕಿ ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸುತ್ತಿದ್ದಾಗ, ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ವೈದ್ಯರ ತಪಾಸಣೆಯ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.