ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರಿಗೆ ಗೌರವ ಧನ ಹೆಚ್ಚಳ…

53
firstsuddi

ಬೆಂಗಳೂರು : ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರಿಗೆ ಗೌರವ ಧನ ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಇದರ ಜತೆಗೆ, ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000 ರೂಪಾಯಿಯಿಂದ 1500 ರೂಗಳ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇನ್ನೂ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

• ಹೋಬಳಿ ಮಟ್ಟದಲ್ಲಿ ‘ಮಾದರಿ ಶಾಲೆ’ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ

• ಸರ್ಕಾರಿ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. ಅನುದಾನ. ‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ

• ರಾಜ್ಯವನ್ನು ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯನ್ನಾಗಿ ಮಾಡಲು 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ: ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ

• ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸ್ಥಾಪನೆ. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ

• ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು. ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ.