ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ…

80
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ದಿ. ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ರೂ. ಅನುದಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ನಟ, ರಾಜಕಾರಣಿ ದಿವಂಗತ ಅಂಬರೀಷ್ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ಅನುದಾನ ನೀಡಲಾಗುವುದು. ಕಂಠೀರವ ಸ್ವುಡಿಯೋದಲ್ಲೇ ಅಂಬರೀಷ್ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.