ನವದೆಹಲಿ : ಉದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವು ಲಂಡನ್ ನ ಬಕಿಂಗ್ ಹ್ಯಾಮ್ ಶೈರ್ ನ ಸ್ಟೋಕ್ ಪಾರ್ಕ್ ಎಸ್ಟೇಟ್ ಖರೀದಿಸಿದ್ದು, ಅಂಬಾನಿ ಕುಟುಂಬವು ಅಲ್ಲಿ ನೆಲೆಸಲಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದವು. ಈ ವಿಚಾರವಾಗಿ ರಿಲಯನ್ಸ್ ಕಂಪನಿಯು ಪ್ರಕಟಣೆ ಬಿಡುಗಡೆ ಮಾಡಿದ್ದು, ಇದು ಆಧಾರರಹಿತವಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಅಂಬಾನಿ ಮತ್ತು ಅವರ ಕುಟುಂಬವು ಲಂಡನ್ ಅಥವಾ ಪ್ರಪಂಚದ ಬೇರೆಲ್ಲಿಯೂ ಸ್ಥಳಾಂತರಗೊಳ್ಳುವ ಅಥವಾ ವಾಸಿಸುವ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಇತ್ತೀಚೆಗೆ ಸ್ಟೋಕ್ ಪಾರ್ಕ್ ಎಸ್ಟೇಟ್ ಅನ್ನು ಸ್ವಾಧೀನಪಡಿಸಿಕೊಂಡಿದ್ದು, ಇದನ್ನು ಗಾಲ್ಫಿಂಗ್ ಮತ್ತು ಕ್ರೀಡಾ ರೆಸಾರ್ಟ್ ಆಗಿ ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಲಾಗಿದೆ ಎಂದು ಕಂಪನಿ ತಿಳಿಸಿದೆ.










