ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ದಾಳಿ : ಐವರ ಬಂಧನ…

100
Firstsuddi

ಮಂಡ್ಯ : ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೀನಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಬಂಗಾರಸ್ವಾಮಿ, ವೇಲ, ಗುರು, ನಾಗರಾಜು ಮತ್ತು ನಾಗ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು, ಸ್ಫೋಟಕಗಳ ಸಮೇತ ಆರೋಪಿಗಳನ್ನು ಹಿಡಿದಿದ್ದಾರೆ. ಬಂಧಿತರಿಂದ ಗನ್ಪೌಡರ್, ಜಿಲೆಟಿನ್ ಕಡ್ಡಿ, ಡಿಟೋನೇಟರ್ ಸೇರಿ ಇನ್ನಿತರ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಮೇಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.