ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿ : ಸಿದ್ದರಾಮಯ್ಯ.

121
First Suddi

ಬೆಂಗಳೂರು : ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಕರ್ನಾಟಕ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುವೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ ಎಂದು ಪ್ರಶ್ನೆ ಮಾಡಿದ್ದಾರೆ.