ಅಕ್ರಮ ಗರ್ಭಪಾತಕ್ಕೆ ಯತ್ನ – 19 ವರ್ಷದ ಯುವತಿ ಸಾವು…

86
firstsuddi

ಚಂಡೀಗಢ : ಅಕ್ರಮ ಗರ್ಭಪಾತಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ನಡೆದಿದೆ.

ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಕೆಯನ್ನು ಗರ್ಭಪಾತಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಗರ್ಭಪಾತಕ್ಕೆ ಪ್ರಯತ್ನಿಸಿದ ಬಳಿಕ ಯುವತಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಅದಾದ ಬಳಿಕ ಆಕೆಯ ಸ್ಥಿತಿ ಹದಗೆಟ್ಟಿರುವುದನ್ನು ಕಂಡು, ಪೋಷಕರು ಆಕೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಕರುಳುಗಳು ಹೊರಬಂದಿದ್ದು, ಗರ್ಭಾಶಯದಲ್ಲಿ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಮೂತ್ರಪಿಂಡಗಳು ಸಹ ವಿಫಲವಾಗಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಆದರೆ ಯುವತಿ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.