ಅಕ್ರಮ ಬಿಪಿಎಲ್ ಕಾರ್ಡ್‍ದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್…

172
firstsuddi

ಬೆಂಗಳೂರು : ಸುಳ್ಳು ದಾಖಲೆ ಕೊಟ್ಟು ಬಿಪಿಎಲ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್‍ದಾರರಿಗೆ ರಾಜ್ಯ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ. ಸರ್ಕಾರಿ ನೌಕರರು ಹಾಗೂ ಟ್ರ್ಯಾಕ್ಟರ್ ಸೇರಿದಂತೆ ಇತರ ವಾಹನವನ್ನು ಹೊಂದಿರುವವರು ತಾವೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಿ ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸುವ ಅಭಿಯಾನ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜನವರಿ ತಿಂಗಳಲ್ಲಿ ಕೋವಿಡ್ ಆರಂಭಕ್ಕೂ ಮುನ್ನ 63 ಸಾವಿರ ಪಡಿತರ ಚೀಟಿಯನ್ನು ರದ್ದುಪಡಿಸಲಾಗಿತ್ತು. ಇದೀಗ ಮತ್ತೆ ಸರ್ಕಾರ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವವರು ಕೂಡಲೇ ಹಿಂದಿರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಡಕ್ ಸೂಚನೆ ನೀಡಿದ್ದಾರೆ.