ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ನಡೆದಿದೆ.
ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಯೂರ್ ಚೌಹಾಣ್(51) ಮೃತ ಅಧಿಕಾರಿ. ಭೀಮಾನದಿ ತೀರದಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಹುಲ್ಲೂರು ಬಳಿ ಚೆಕ್ ಪೋಸ್ಟ್ ಹಾಕಲಾಗಿತ್ತು. ರಾತ್ರಿ ಮರಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮೈ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಎಸ್ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸಂತಾಪ ಸೂಚಿಸಿದ್ದು, ಸರ್ಕಾರದ ವತಿಯಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.










