ಅಕ್ರಮ ಮರಳು ಗಣಿಗಾರಿಕೆ ಪ್ರಕರಣ ; ಚರಂಜಿತ್ ಸಿಂಗ್ ಚನ್ನಿ ವಿಚಾರಣೆ ನಡೆಸಿದ ಇಡಿ.

69
firstsuddi

ನವದೆಹಲಿ : ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ.

2018ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಇಂದು ಚನ್ನಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇಂದು ಹಲವು ಗಂಟೆಗಳ ಕಾಲ ವಿಚಾರಣೆ ನಡೆದಿದೆ.

ಈ ಪ್ರಕರಣದಲ್ಲಿ ಚನ್ನಿ ಸೋದರಳಿಯ ಭೂಪೇಂದರ್ ಸಿಂಗ್ ಅವರನ್ನು ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಬಂಧಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಭೂಪೇಂದ್ರ ಸಿಂಗ್ ಮತ್ತಿತರರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆಯಾಗಿತ್ತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಕ್ಷೇತ್ರಗಳಿಂದ ಸೋಲು ಕಂಡಿದ್ದ ಚರಂಜಿತ್ ಸಿಂಗ್ ಮಾರ್ಚ್ 10 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.