ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ‘ಪದ್ಮಶ್ರೀ’ ಪ್ರಶಸ್ತಿ…

80
firstsuddi

ನವದೆಹಲಿ : ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಇಂದು ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಅವರು ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿ, ನೂರಾರು ಮಕ್ಕಳ ವಿದ್ಯಾರ್ಜನೆಗೆ ನೆರವಾದ ಕಿತ್ತಳೆ ವ್ಯಾಪಾರಿಯಾಗಿದ್ದ ಹರೇಕಳ ಹಾಜಬ್ಬ ಅವರಿಗೆ 2020 ರ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಆದರೆ ಕೊರೊನಾ ಕಾರಣದಿಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಲ. ಈ ಹಿನ್ನೆಲೆ ಇಂದು ಹರೇಕಳ ಹಾಜಬ್ಬ ಅವರಿಗೆ ಪ್ರಶಸ್ತಿ ನೀಡಲಾಯಿತು.