ಅಖಿಲೇಶ್ ಯಾದವ್ ಪತ್ನಿ, ಪುತ್ರಿಗೆ ಕೊರೊನಾ ಪಾಸಿಟಿವ್…

74
firstsuddi

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಮತ್ತು ಪುತ್ರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬುಧವಾರ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಮಾಜಿ ಸಂಸದೆ ಡಿಂಪಲ್ ಯಾದವ್ ಮತ್ತು ಮಗಳಿಗೆ ಕೊರೊನಾ ದೃಢಪಟ್ಟಿದ್ದು, ಅಖಿಲೇಶ್ ಯಾದವ್ ಅವರಿಗೆ ನೆಗೆಟಿವ್ ವರದಿ ಬಂದಿದೆ.

ಈ ಬಗ್ಗೆ ಡಿಂಪಲ್ ಯಾದವ್ ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದು, ನನಗೆ ಕೋವಿಡ್-19 ದೃಢಪಟ್ಟಿದೆ. ನಾನು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡಿದ್ದೇನೆ. ನನಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇದೀಗ ನಾನು ಕ್ವಾರಂಟೈನ್ ನಲ್ಲಿದ್ದು, ಇತ್ತೀಚೆಗಷ್ಟೇ ನನ್ನನ್ನು ಭೇಟಿಯಾದ ಎಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.