ಅಗ್ನಿ ದುರಂತ ; ಏಳು ಜನ ಸಜೀವ ದಹನ…

78
firstsuddi

ಇಂದೋರ್ : ಎರಡು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿರುವ ಘಟನೆ ಇಂದೋರ್ ನ ಸ್ವರ್ಣ ಬಾಗ್ ಕಾಲೋನಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಘಟನೆಯ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಮನೆಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಏಳು ಮಂದಿ ಸಜೀವ ದಹನವಾಗಿದ್ದು, ಇದುವರೆಗೆ ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸ್ ಕಮಿಷನರ್ ಹರಿನಾರಾಯಣ್ ಚಾರಿ ಮಿಶ್ರಾ ಹೇಳಿದ್ದಾರೆ.

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.