ನವದೆಹಲಿ : ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಗುಡ್ ನ್ಯೂಸ್ ನೀಡಿದೆ.
ಪ್ರತಿ ಲೀಟರ್ ಅಡುಗೆ ಎಣ್ಣೆ ಬೆಲೆಯಲ್ಲಿ 15 ರೂಪಾಯಿ ಇಳಿಕೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆ ಹಿನ್ನೆಲೆ ದೇಶದಲ್ಲೂ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಇದಕ್ಕೆ ಕಂಪನಿಗಳು ಒಪ್ಪಿಗೆ ಸೂಚಿಸಿರುವ ಕಾರಣ ಬೆಲೆ ಇಳಿಕೆ ಮಾಡಲಾಗಿದೆ.










