ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ…

155
firstsuddi

ಬೆಂಗಳೂರು : ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು 2,500 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಾಥಮಿಕ ಶಿಕ್ಷಕರಿಗೆ ಪ್ರಸ್ತುತ 7,500 ರೂ.ಗಳಿದ್ದು, ಅದನ್ನು 10,000 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೂ ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರಿಗೆ ಪ್ರಸ್ತುತ 8,000 ರೂ. ಇದ್ದು, 10,500 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.

ಈ ಹಿಂದೆ ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿ 2,500 ರೂಪಾಯಿಗೆ ಹೆಚ್ಚಳ ಮಾಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.