ಅತ್ತೆಯ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಅಳಿಯ…!

975
firstsuddi

ಹೈದರಾಬಾದ್ : ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾಸುವ ಮುನ್ನವೇ ಹೈದರಾಬಾದ್‍ನಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಲ್ಲೊಬ್ಬ ಅಳಿಯ ಕುಡಿದ ಅಮಲಿನಲ್ಲಿ 48 ವರ್ಷದ ಅತ್ತೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್‍ನ ಪುಂಜಗುತ್ತ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ಕೆಲವು ವರ್ಷದ ಹಿಂದೆ ತನ್ನ ಮಗಳು ಹಾಗೂ ಅಳಿಯನ ಜೊತೆ ವಾಸವಾಗಿದ್ದರು. ಮಗಳು ಮತ್ತು ಅಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಹಿಳೆ ತನ್ನ ಮೊಮ್ಮಗನನ್ನು ನೋಡಿಕೊಂಡು ಮನೆಯಲ್ಲೇ ಇದ್ದರು. ಘಟನೆ ನಡೆದ ದಿನ ಮಗಳು ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದರು. ಇದೇ ಸಮಯವನ್ನು ಉಪಯೋಗಿಸಿಕೊಂಡ ಅಳಿಯ ನಿನ್ನೆ ರಾತ್ರಿ ನೇರವಾಗಿ ಅತ್ತೆ ಮಲಗಿದ್ದ ಕೋಣೆಗೆ ತೆರಳಿದ್ದಾರೆ. ಈ ವೇಳೆ ಅತ್ತೆಯ ಮೇಲೆ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅಳಿಯನ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆರೋಪಿ ತನ್ನ ಪತ್ನಿ ಬಳಿ ಕ್ಷಮೆ ಕೇಳಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.