ಅತ್ಯಾಚಾರ ಆರೋಪ – ದನುಷ್ಕ ಗುಣತಿಲಕಗೆ ಜಾಮೀನು ನಿರಾಕರಣೆ…

156
firstsuddi

ಕೊಲಂಬೊ : ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣತಿಲಕ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನಿರಾಕರಿಸಿದ್ದು, ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.

ಟಿ20 ವಿಶ್ವಕಪ್ ನ ಶ್ರೀಲಂಕಾದ ತಂಡದಲ್ಲಿದ್ದ ಕ್ರಿಕೆಟಿಗ ದನುಷ್ಕ ಗುಣತಿಲಕ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಆಸ್ಟ್ರೇಲಿಯಾದಲ್ಲಿ ಬಂಧಿಸಲಾಗಿದೆ. ಆನ್ ಲೈನ್ ಡೇಟಿಂಗ್ ಅಪ್ಲಿಕೇಶನ್ ನಲ್ಲಿ ಹಲವು ದಿನಗಳ ಹಿಂದೆ ಮಹಿಳೆಯ ಪರಿಚಯವಾಗಿದ್ದು, ನವೆಂಬರ್ 2 ರಂದು ಅವರಿಬ್ಬರು ಭೇಟಿಯಾದ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುಣತಿಲಕ ಅವರನ್ನು ಬಂಧಿಸಿ ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಈಗ ಬಂಧನಕ್ಕೊಳಗಾಗಿರುವ ಲಂಕಾ ಕ್ರಿಕೆಟರ್ ಆಸ್ಟ್ರೇಲಿಯಾದ ಕಾನೂನಿನ ಪ್ರಕಾರ ಭಾರೀ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಇನ್ನೂ ಅತ್ಯಾಚಾರ ಆರೋಪ ಕೇಳಿಬಂದಿರುವ ದನುಷ್ಕ ಗುಣತಿಲಕ ಅವರನ್ನ ಎಲ್ಲ ಮಾದರಿಯ ಕ್ರಿಕೆಟ್‌ನಿಂದಲೂ ಅಮಾನತುಗೊಳಿಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಶನಿವಾರ ಟೂರ್ನಿಯಿಂದ ಶ್ರೀಲಂಕಾ ತಂಡ ಹೊರಬಿದ್ದಿದ್ದು, ಪ್ರಕರಣದ ಹಿನ್ನೆಲೆ ದನುಷ್ಕ ಹೊರತು ಉಳಿದ ಎಲ್ಲಾ ಆಟಗಾರರು ತವರಿಗೆ ಮರಳಿದ್ದಾರೆ.