ಅಧಿಕಾರಿವರ್ಗ, ಆರಕ್ಷಕರು ಹಾಗೂ 14 ಲೋಕಸಭಾ ಕ್ಷೇತ್ರದ ಜನತೆಗೆ ಅನಂತ ಧನ್ಯವಾದಗಳು : ಬಿ.ಎಸ್. ಯಡಿಯೂರಪ್ಪ…

197
firstsuddi

ಬೆಂಗಳೂರು : ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಅಧಿಕಾರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಟ್ವಿಟರ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಮೊದಲ ಹಂತದ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಹಗಲು ರಾತ್ರಿಯೆನ್ನದೆ ದುಡಿದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಅಧಿಕಾರಿವರ್ಗ, ಆರಕ್ಷಕರು ಹಾಗೂ ನಮ್ಮನ್ನು ಆಶೀರ್ವದಿಸಿದ 14 ಲೋಕಸಭಾ ಕ್ಷೇತ್ರದ ಜನತೆಗೆ ಅನಂತ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.