ಅನರ್ಹ ಶಾಸಕರ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ…

337
firstsuddi

ನವದೆಹಲಿ : ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಅನರ್ಹ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಅರ್ಜಿ ತುರ್ತು ವಿಚಾರಣೆ ನಡೆಸಬೇಕು ಎಂದು ಅನರ್ಹ ಶಾಸಕರು ಇಂದು ನ್ಯಾ. ಎನ್.ವಿ.ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದರು. ಆದರೆ ತುರ್ತು ವಿಚಾರಣೆ ಇಂದು ಸಾಧ್ಯವಿಲ್ಲ ಎಂದು ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನ್ಯಾ.ಎನ್.ವಿ.ರಮಣ ದ್ವಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿದರಿಂದ ಮಂಗಳವಾರ ಮುಖ್ಯನ್ಯಾಯಮೂರ್ತಿಗಳ ಪೀಠದ ಮುಂದೆ ಅನರ್ಹ ಶಾಸಕರು ಮತ್ತೊಮ್ಮೆ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಯೋಧ್ಯೆ ವಿವಾದ ಸಂಬಂಧಿಸಿದಂತೆ ಮುಖ್ಯ ನ್ಯಾಯಧೀಶರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಬೇರೆ ಅರ್ಜಿಗಳನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಮತ್ತೊಮ್ಮೆ ನಮ್ಮ ಅರ್ಜಿಯನ್ನು ಸಲ್ಲಿಸಿ ವಿಚಾರಣೆಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅವರು ತಿಳಿಸಿದರು.