ಅನಾರೋಗ್ಯ ಪೀಡಿತ ತಾಯಿಯನ್ನು ನೀರು ತರುವ ತಳ್ಳುವ ಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದ ಮಗ…

118
firstsuddi

ಕೊಪ್ಪಳ : ಅನಾರೋಗ್ಯ ಪೀಡಿತ ತಾಯಿಯನ್ನು ಮಗ ತಳ್ಳುವ ಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೊಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಜುಂಜಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಪ್ಪ ಎಂಬುವವರು ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಬಸ್ ವ್ಯವಸ್ಥೆ ಹಾಗೂ ಇತರೆ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದ ಕಾರಣ ನೀರು ತರುವ ತಳ್ಳುವ ಗಾಡಿಯಲ್ಲಿ ತಾಯಿಯನ್ನು ಕೂರಿಸಿಕೊಂಡು ಜುಂಜಲಕೊಪ್ಪ ಗ್ರಾಮದಿಂದ ಚಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 3 ಕಿ.ಮೀ ವರೆಗೆ ಗಾಡಿ ತಳ್ಳಿಕೊಂಡೇ ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.