ಚಿಕ್ಕಮಗಳೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ನೀಡಲಾಗುವ ಅನಿತಾ ಕೌಲ್ ಸ್ಮರಣಾರ್ಥ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡಿಗೆರೆ ಬಿಳಗುಳದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅಸ್ಗರ್ ಅಲಿ ಖಾನ್ ಪಾತ್ರರಾಗಿದ್ದಾರೆ. ಬೆಂಗಳೂರಿನ ಬಿ ಎಂ ಎಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಜನವರಿ 12 ರಂದು ನಡೆಯಲಿರುವ ಸಮಾರಂಭದಲ್ಲಿ ಅಸ್ಗರ್ ಅಲಿ ಖಾನ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಧ್ಯಕ್ಷ ಮುಗಳಿಕಟ್ಟೆ ಲೋಕೇಶ್ ತಿಳಿಸಿದ್ದಾರೆ.
Home ಸ್ಥಳಿಯ ಸುದ್ದಿ ಅನಿತಾ ಕೌಲ್ ಸ್ಮರಣಾರ್ಥ ರಾಜ್ಯ ಪ್ರಶಸ್ತಿಗೆ ಭಾಜನರಾದ ಮೂಡಿಗೆರೆ ಬಿಳಗುಳದ ಶಿಕ್ಷಕ ಅಸ್ಗರ್ ಅಲಿ ಖಾನ್.