ಹಾವೇರಿ : ಅನ್ಯಕೋಮಿನ ಯುವಕರ ಗುಂಪೊಂದು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. ಪಟ್ಟಣದಲ್ಲಿ ಪಥಸಂಚಲನ ನಡೆಸುವ ಸಲುವಾಗಿ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಹಲ್ಲೆ ಮಾಡಲಾಗಿದೆ.
ಘಟನೆಯಲ್ಲಿ ಓರ್ವ ಕಾರ್ಯಕರ್ತನ ತಲೆಗೆ ಏಟು ಬಿದ್ದಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವಿಗೆ ರಟ್ಟೀಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅನ್ಯಕೋಮಿನ ಹತ್ತು ಜನರನ್ನು ಬಂಧಿಸಿದ್ದೇವೆ ಎಂದು ಎಸ್ ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ. ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಟ್ಟೀಹಳ್ಳಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.










