ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ – ಪುನೀತ್ ಜನ್ಮದಿನ ಇನ್ಮುಂದೆ ಸ್ಫೂರ್ತಿ ದಿನ…

91
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟ ದಿ. ಡಾ.ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್‍ನ್ಯೂಸ್ ಕೊಟ್ಟಿದೆ. ಪುನೀತ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ ಎಂದು ಹೇಳಿದ್ದಾರೆ.