ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು…

72
firstsuddi

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರು ಅಗಲಿ ಇಂದಿಗೆ 2 ತಿಂಗಳು ಕಳೆದಿದೆ. ಈ ಹಿನ್ನಲೆ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಅಪ್ಪು ಸಮಾಧಿಯನ್ನು ಹೂಗಳಿಂದ ಅಲಂಕರಿಸಿ, ಪುನೀತ್ ಅವರಿಗೆ ಇಷ್ಟವಾದ ತಿನಿಸುಗಳ ಎಡೆ ಇಟ್ಟು ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಅವರ ಮಕ್ಕಳು ಸಮಾಧಿಯನ್ನು ನೋಡುತ್ತ ಭಾವುಕರಾದರು.

ಪೂಜಾ ಕಾರ್ಯದಲ್ಲಿ ಪುನೀತ್ ಪತ್ನಿ ಅಶ್ವಿನಿ, ಮಕ್ಕಳು, ರಾಘವೇಂದ್ರ ರಾಜ್ಕುಮಾರ್, ಶಿವರಾಜ್ ಕುಮಾರ್, ಸೇರಿದಂತೆ ದೊಡ್ಮನೆ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.