ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು…

323
firstsuddi

ಬಳ್ಳಾರಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ. ಪಟ್ಟಣದ ಡ್ರೈವರ್ ಕಾಲೋನಿ ನಿವಾಸಿ ಮೂರ್ತಿ ಎಂಬಾತ ಅದೇ ಗ್ರಾಮದ 5ವರ್ಷದ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ನಗರದ ನಿರ್ಜನ ಪ್ರದೇಶಕ್ಕೆ ಕೊರೆದೊಯ್ದು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಗು ಅಳುತ್ತಿದ್ದ ಧ್ವನಿ ಕೇಳಿದ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿ ಕಾಮುಕನನ್ನು ಎಳೆದುಕೊಂಡು ಬಂದು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿ ಸಿರಗುಪ್ಪ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.