ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರದ ಕಾನೂನು ಜಾರಿಯಾಗುವುದಿಲ್ಲ ಎಂದು ತಾಲಿಬಾನ್ ಹೇಳಿದೆ.
ಮಾಧ್ಯಮಕ್ಕೆ ಸಂದರ್ಶನ ನೀಡಿದ ತಾಲಿಬಾನ್ ಮುಖಂಡ ವಹಿದುಲ್ಲಾ ಹಶೆಮಿ, ಅಫ್ಘಾನಿಸ್ತಾನದಲ್ಲಿ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ. ದೇಶದಲ್ಲಿ ಷರಿಯಾ ಕಾನೂನು ಅನ್ವಯವಾಗಲಿದೆ. ಅಫ್ಘಾನಿಸ್ತಾನದಲ್ಲಿ ಯಾವ ರೀತಿಯ ರಾಜಕೀಯ ವ್ಯವಸ್ಥೆ ಇರಬೇಕು ಎಂಬುದರ ಬಗ್ಗೆ ನಾವು ಯಾವುದೇ ಚರ್ಚೆ ಮಾಡುವುದಿಲ್ಲ. ಈಗಾಗಲೇ ಷರಿಯಾ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರ ಸ್ಪಷ್ಟವಾಗಿದೆ ಎಂದಿದ್ದಾರೆ.
1996 ರಿಂದ 2001 ರವರೆಗೆ ತಾಲಿಬಾನಿಗಳು ಕೊನೆಯ ಬಾರಿಗೆ ಅಫ್ಘಾನಿಸ್ತಾನವನ್ನು ಹೇಗೆ ನಡೆಸುತ್ತಿದ್ದರು ಎಂಬುದನ್ನು ವಿವರಿಸಿರುವ ವಹೀದುಲ್ಲಾ ಹಾಶಿಮಿ, ಅದೇ ಮಾದರಿಯಲ್ಲಿ ಅಧಿಕಾರವನ್ನು ನಡೆಸುವುದಾಗಿ ಹೇಳಿದ್ದಾರೆ.










