ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ- ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು…

73
firstsuddi

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇಂದು ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.

ಈ ವಾರ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಭೂಕಂಪದಲ್ಲಿ ಈವರೆಗೆ ಯಾವುದೇ ಸಾವು, ನೋವುಗಳ ವರದಿಯಾಗಿಲ್ಲ.

ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಬುಧವಾರ ಬೆಳಿಗ್ಗೆ 5.10ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು, ಹೆರಾತ್ ನಗರದ ಉತ್ತರಕ್ಕೆ 28 ಕಿ.ಮೀ. ದೂರದಲ್ಲಿ ಪತ್ತೆಯಾಗಿತ್ತು. ಅಕ್ಟೋಬರ್ 7 ರಂದು ಹೆರಾತ್ ನಗರದಿಂದ ಸುಮಾರು 40 ಕಿಮೀ (25 ಮೈಲುಗಳು) ಗ್ರಾಮಾಂತರ ಜಿಲ್ಲೆಯ ಜಿಂದಜಾನ್‌ಗೆ ಅಪ್ಪಳಿಸಿದ ಭೂಕಂಪದಲ್ಲಿ ಬದುಕುಳಿದವರಿಗಾಗಿ ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ.