ಅಫ್ಘಾನಿಸ್ತಾನದಲ್ಲಿ ವಿದೇಶಿ ಕರೆನ್ಸಿ ಬಳಕೆಗೆ ನಿಷೇಧ ಹೇರಿದ ತಾಲಿಬಾನ್…

67
firstsuddi

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ವಿದೇಶಿ ಕರೆನ್ಸಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ತಾಲಿಬಾನ್ ಆದೇಶ ಹೊರಡಿಸಿದೆ.

ಅಫ್ಘಾನ್ ನಲ್ಲಿರುವ ಆರ್ಥಿಕ ಪರಿಸ್ಥಿತಿ ಪರಿಗಣಿಸಿ ಮತ್ತು ಇಲ್ಲಿನ ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಈ ದೇಶದ ಜನರು ತಮ್ಮ ಪ್ರತಿ ವ್ಯವಹಾರದಲ್ಲೂ ಅಫ್ಘಾನಿಸ್ತಾನದ ಕರೆನ್ಸಿಯನ್ನೇ ಬಳಸಬೇಕು ಎಂದು ಸೂಚಿಸಲಾಗಿದೆ.

ಅಲ್ಲದೇ ವಿದೇಶಿ ಕರೆನ್ಸಿಯನ್ನು ದೇಶೀಯ ವ್ಯವಹಾರಕ್ಕೆ ಬಳಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಾಲಿಬಾನ್​ ವಕ್ತಾರರು ಹೇಳಿದ್ದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.