ಅಭಿಮಾನಿಗಳಿಗೆ ಗುಡ್ ನ್ಯೂಸ್ – ಶೀಘ್ರದಲ್ಲೇ ತಂದೆಯಾಗಲಿದ್ದಾರೆ ಧ್ರುವ ಸರ್ಜಾ.

66
firstsuddi

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಧ್ರುವ ಸರ್ಜಾ ತಾವು ತಂದೆಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಚಿರು ಅಗಲಿಕೆಯ 2 ವರ್ಷಗಳ ಬಳಿಕ ಸರ್ಜಾ ಕುಟುಂಬಕ್ಕೆ ವಿಶೇಷ ಅತಿಥಿಯ ಆಗಮನವಾಗುತ್ತಿದೆ. ಇದೇ ಖುಷಿಯಲ್ಲಿ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗಳಿದ್ದು, ಇದೇ ತಿಂಗಳು ಪುಟಾಣಿಯನ್ನು ಬರ ಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ.

ಧ್ರುವ ಸರ್ಜಾ-ಪ್ರೇರಣಾ ವಿಶೇಷ ಫೋಟೋಶೂಟ್ ಮಾಡಿಸಿಕೊಂಡಿದ್ದು, ಈ ವಿಡಿಯೋವನ್ನು ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಾವು ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ. ದೈವಿಕವಾಗಿ ನಮ್ಮನ್ನು ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇರಣಾ ಶಂಕರ್ 3 ವರ್ಷದ ಹಿಂದೆ ಮದುವೆ ಆಗಿದ್ದರು.