ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ತಮ್ಮ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಾರ್ಟರ್ ಅಮೆರಿಕದ ಇತಿಹಾಸದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಅಧ್ಯಕ್ಷರಾಗಿದ್ದರು. ಅಧ್ಯಕ್ಷರಾಗಿದ್ದಾಗ ಸಾಕಷ್ಟು ಟೀಕೆಗಳನ್ನು ಎದುರಿಸುವಂತಾಯಿತು. ಜಿಮ್ಮಿ ಕಾರ್ಟರ್ ಮೆಲನೋಮಾ ಎಂಬ ಚರ್ಮದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಕ್ಟೋಬರ್ 1, 1924 ರಂದು ಜಾರ್ಜಿಯಾದಲ್ಲಿ ಜನಿಸಿದ್ದ ಜಿಮ್ಮಿ ಕಾರ್ಟರ್ ಅಮೆರಿಕದ 39 ನೇ ಅಧ್ಯಕ್ಷರಾಗಿದ್ದರು. ಅವರ ತಂದೆ ಕೃಷಿಕರಾಗಿದ್ದರು. ಜಿಮ್ಮಿ ಕಾರ್ಟರ್ ಅವರು 1976 ರಿಂದ 1980 ರವರೆಗೆ ಯುನೈಟೆಡ್ ಸ್ಟೇಟ್ಸ್ನ 39 ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಅಧ್ಯಕ್ಷರಾಗುವ ಮೊದಲು, ಅವರು ಯುನೈಟೆಡ್ ಸ್ಟೇಟ್ಸ್ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು, ಜಾರ್ಜಿಯಾದಲ್ಲಿ ಸೆನೆಟರ್ ಆಗಿದ್ದರು ಮತ್ತು ಜಾರ್ಜಿಯಾದ ಗವರ್ನರ್ ಕೂಡ ಆಗಿದ್ದರು. ಅವರ ಅಧ್ಯಕ್ಷೀಯ ಅಧಿಕಾರಾವಧಿಯ ಬಳಿಕ, ಅವರು ಮಾನವ ಹಕ್ಕುಗಳ ಸಂಘಟನೆಗಳು ಮತ್ತು ದತ್ತಿ ಸಂಸ್ಥೆಗಳೊಂದಿಗೆ ಸಂಬಂಧವನ್ನು ಹೊಂದಿದ್ದರು. ಅಧ್ಯಕ್ಷ ಸ್ಥಾನವನ್ನು ಬಿಟ್ಟ 1 ವರ್ಷದ ಬಳಿಕ ಅವರು ‘ಕಾರ್ಟರ್ ಸೆಂಟರ್’ ಎಂಬ ಹೆಸರಿನ ದತ್ತಿಯನ್ನು ಸ್ಥಾಪಿಸಿದ್ದಾರೆ. ಮಾನವ ಹಕ್ಕುಗಳನ್ನು ಬೆಂಬಲಿಸುವಲ್ಲಿ, ಚುನಾವಣೆಗಳಲ್ಲಿ ಪಾರದರ್ಶಕತೆ ತರುವಲ್ಲಿ ಮತ್ತು ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ಚಾರಿಟಿ ಪ್ರಮುಖ ಪಾತ್ರ ವಹಿಸಿತ್ತು. ಅವರಿಗೆ 2022ರಲ್ಲಿ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 1982 ರಲ್ಲಿ, ಕಾರ್ಟರ್ ಅಟ್ಲಾಂಟಾ, ಜಾರ್ಜಿಯಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಕಾರ್ಟರ್ ಸೆಂಟರ್ ಸ್ಥಾಪಿಸಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ಕಾರ್ಯನಿರ್ವಹಿಸುತ್ತದೆ ಎಂಬ ಮಾಹಿತಿ ತಿಳಿಸಲಾಗಿದೆ.










