ಅಮೆರಿಕದ ಶಾಲೆ ಮೇಲೆ ಗುಂಡಿನ ದಾಳಿ – 6 ಮಂದಿ ಸಾವು…

42
firstsuddi

ವಾಷಿಂಗ್ಟನ್: ಅಮೆರಿಕದ ನ್ಯಾಶ್ವಿಲ್ಲೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ.

ಶೂಟರ್ ಅನ್ನು ಆಡ್ರೆ ಹೇಲ್ (28) ಎಂದು ಗುರುತಿಸಲಾಗಿದೆ. ಆಕೆ ನ್ಯಾಶ್ವಿಲ್ಲೆಯಲ್ಲಿರುವ ಕವೆನೆಂಟ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಳು ಎನ್ನಲಾಗಿದೆ. ಆಕೆ ಇಡೀ ದುಷ್ಕೃತ್ಯವನ್ನು ಮೊದಲೇ ಯೋಜಿಸಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ತಿಳಿಯುತ್ತಲೇ ಸ್ಥಳಕ್ಕೆ ಬಂದ ಪೊಲೀಸರು ಸ್ಥಿತಿಯನ್ನು ನಿಯಂತ್ರಿಸಲು ಹೇಲ್ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆಕೆಯೂ ಸಾವನ್ನಪ್ಪಿದ್ದಾಳೆ. ಗುಂಡಿನ ದಾಳಿಗೆ 6 ಜನ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಈ ಹಿಂದೆಯೂ ಇಂತಹ ದಾಳಿಗಳು ಅಮೆರಿಕದಲ್ಲಿ ನಡೆದಿವೆ. ಜನವರಿಯಲ್ಲಿ ಅಮೆರಿಕದ ಅಯೋವಾದಲ್ಲಿ ಶಾಲೆಯೊಂದರಲ್ಲಿ ಗುಂಡಿನ ದಾಳಿ ನಡೆದಿತ್ತು. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಯ ಎರಡು ದಿನಗಳ ಮೊದಲು, ಕ್ಯಾಲಿಫೋರ್ನಿಯಾದಲ್ಲಿ ಅಪ್ರಚೋದಿತ ಗುಂಡಿನ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದರು. ಇದಲ್ಲದೇ ಹಲವರು ಗಾಯಗೊಂಡಿದ್ದರು.