ಅಮೆರಿಕ ರಾಯಭಾರಿ ಕಚೇರಿ ಬೆಂಗಳೂರಿನಲ್ಲಿ ಆರಂಭ.

13

ಬೆಂಗಳೂರು: ಬೆಂಗಳೂರಲ್ಲಿ ಅಮೆರಿಕಾ ದೂತಾವಾಸ ಕಚೇರಿ ಉದ್ಘಾಟನೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಸಚಿವ ಎಂಬಿ ಪಾಟೀಲ್, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಾಗೇ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಭಾಗವಹಿಸಿದ್ದರು. ಕರ್ನಾಟಕದ ಜನರು ಅಮೆರಿಕಾ ವೀಸಾಕ್ಕಾಗಿ ಇಲ್ಲಿಯವರೆಗೆ ಹೈದರಾಬಾದ್, ದೆಹಲಿ, ಚೆನ್ನೈ ಮತ್ತು ಮುಂಬೈಗೆ ಹೋಗಬೇಕಿತ್ತು. ಆದರೆ ಇನ್ಮುಂದೆ ಈ ಕಷ್ಟ ಇರುವುದಿಲ್ಲ. ಕನ್ನಡಿಗರು ಇನ್ಮುಂದೆ ಬೆಂಗಳೂರಿನಲ್ಲೇ ವೀಸಾ ಪಡೆಯಬಹುದಾಗಿದೆ. ಆದರೆ, ವೀಸಾ ಸೇವೆ ಇನ್ನೂ ವಿಳಂಬವಾಗಲಿದೆ. ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮಥ್ರ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ ಹತ್ತು ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ತಿಳಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ರವರು ಹೇಳಿದರು.