ಅಮ್ಮ ಯಾರೊಂದಿಗೋ ಸಂಬಂಧ ಬೆಳೆಸಿಕೊಂಡಿದ್ದಾಳೆ ಎಂದು ಅನುಮಾನಿಸಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!

83
firstsuddi

ಪಾಲ್ಘರ್: ಅಮ್ಮ ಯಾರೊಂದಿಗೋ ಸಂಬಂಧ ಬೆಳೆಸಿಕೊಂಡಿದ್ದಾಳೆ ಎಂದು ಅನುಮಾನಿಸಿದ ಪುತ್ರ, ತನ್ನ ತಾಯಿಯನ್ನೇ ಕೊಡಲಿಯಿಂದ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕನಿಗೆ ತನ್ನ ತಾಯಿ ಸೋನಾಲಿ ಗೊಗ್ರಾ (35) ನಡವಳಿಕೆ ಬಗ್ಗೆ ಅನುಮಾನವಿತ್ತು. ಇಬ್ಬರೂ ಪಾಲ್ಘರ್ ಜಿಲ್ಲೆಯ ವಸಾಯಿ ನಗರದ ನಿವಾಸಿಯಾಗಿದ್ದರು. ಭಾನುವಾರ ರಾತ್ರಿ ಊಟ ಮಾಡುತ್ತಿದ್ದಾಗ ಆತನ ತಾಯಿ ಮೊಬೈಲ್‌ನಲ್ಲಿ ಯಾರಿಗೋ ಮೆಸೇಜ್ ಕಳುಹಿಸುತ್ತಿರುವುದನ್ನು ಗಮನಿಸಿದ ಬಾಲಕ ಕೋಪಗೊಂಡು ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಅನುಮಾನಿಸಿ ಆಕೆಯ ಜೊತೆ ಜಗಳವಾಡಿದ್ದಾನೆ.

ಇಬ್ಬರ ನಡುವೆ ವಾಗ್ವಾದ ನಡೆದು ಕೋಪದಲ್ಲಿ ಮಗ ಮನೆಯಲ್ಲಿದ್ದ ಕೊಡಲಿಯಿಂದ ತಾಯಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಘಟನೆಯ ವೇಳೆ ಕುಟುಂಬದ ಇತರ ಸದಸ್ಯರು ಮನೆಯಲ್ಲಿ ಇರಲಿಲ್ಲ. ನಂತರ ನೆರೆಹೊರೆಯವರು ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಕೂಡಲೇ ಭಿವಂಡಿಯ ಇಂದಿರಾಗಾಂಧಿ ಸ್ಮಾರಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮಾಂಡವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.