ಅಯೋಧ್ಯೆ ತೀರ್ಪು-ಮರುಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ…

212
firstsuddi

ನವದೆಹಲಿ : ಅಯೋಧ್ಯೆ ತೀರ್ಪು ಪ್ರಶ್ನಿಸಿ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ. ಅಯೋಧ್ಯೆ ತೀರ್ಪಿಗೆ ಸಂಬಂಧಿಸಿದಂತೆ ಇಂದು 7ಮಂದಿ ಸದಸ್ಯರಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ 6 ಮಂದಿ ಸದಸ್ಯರು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುವುದು ಬೇಡ ಎಂದು ಹೇಳಿದ್ದು, ಉಳಿದ ಒಬ್ಬ ಸದಸ್ಯ ಅರ್ಜಿ ಸಲ್ಲಿಸಲೇಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುನ್ನಿ ವಕ್ಫ್ ಬೋರ್ಡ್ ಸದಸ್ಯ ಅಬ್ದುಲ್ ಖಾನ್ ಅವರು 7ಮಂದಿ ಸದಸ್ಯರಲ್ಲಿ 6ಮಂದಿ ಮೇಲ್ಮನವಿ ಸಲ್ಲಿಸುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದು, ಹೀಗಾಗಿ ಅರ್ಜಿ ಸಲ್ಲಿಸದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ನವೆಂಬರ್ 9ರಂದು ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಅಯೋಧ್ಯೆ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ತೀರ್ಪು ನೀಡಿತ್ತು. ಅಲ್ಲದೇ ಅಯೋಧ್ಯೆ ಜಾಗ ನಮಗೆ ಸೇರಬೇಕಾಗಿದ್ದು ಎಂದು ಹೇಳಿದ್ದ ಸುನ್ನಿ ವಕ್ಫ್ ಬೋರ್ಡ್ ಸಂಸ್ಥೆಗೆ ಬೇರೆ ಎಲ್ಲಾದರೂ 5ಎಕರೆ ಜಾಗ ನೀಡಬೇಕು ಎಂದು ಆದೇಶ ಹೊರಡಿಸಿತ್ತು.