ಅಯೋಧ್ಯೆ ತೀರ್ಪು ಹಿನ್ನೆಲೆ-ಸಾರ್ವಜನಿಕರಿಗೆ ಪೊಲೀಸರಿಂದ 10 ಸೂಚನೆಗಳು…

568
firstsuddi

ಬೆಂಗಳೂರು : ಇಂದು ಅಯೋಧ್ಯೆ ತೀರ್ಪು ಹಿನ್ನೆಲೆ, ಪೊಲೀಸರು ಸಾರ್ವಜನಿಕರಿಗೆ ಕೆಲವೊಂದು ಎಚ್ಚರಿಕೆಯನ್ನು ನೀಡಿದ್ದಾರೆ. ಅಯೋಧ್ಯೆ ತೀರ್ಪು ಪರ-ವಿರೋಧ ಏನೇ ಬಂದರೂ ವಿಜಯೋತ್ಸವ ಆಚರಿಸುವುದು ಹಾಗೂ ಘೋಷಣೆ ಕೂಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

• ಫೇಸ್‍ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್, ಟ್ವಿಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾಧಾತ್ಮಕ ಸಂದೇಶಗಳನ್ನು, ಕಮೆಂಟ್‍ಗಳನ್ನು, ಪೋಸ್ಟ್‍ಗಳನ್ನು ಹಾಕಬೇಡಿ.

• ಸಾಮಾಜಿಕ ಜಾಲತಾಣಗಳಿಗೆ ಕಟ್ಟು ನಿಟ್ಟಿನ ನಿಯಮಗಳು ಅನ್ವಯವಾಗಲಿದ್ದು, ಫೇಸ್ ಬುಕ್, ಇನ್ ಸ್ಟಾಗ್ರಾಂ, ವಾಟ್ಸ್ ಆ್ಯಪ್, ಟ್ವಿಟ್ಟರ್ ಹಾಗೂ ಇನ್ನಿತರೇ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗುವುದು.
• ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಂಡು ಯಾರಿಗೂ ತಪ್ಪು ಸಂದೇಶವನ್ನು ರವಾನಿಸಬೇಡಿ, ಈ ಬಗ್ಗೆ ಮಕ್ಕಳು, ಸಹೋದರ, ಸಹೋದರಿ, ಅಕ್ಕ ಪಕ್ಕದವರಿಗೂ ಮಾಹಿತಿಯನ್ನು ತಿಳಿಸಿ.
• ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದಂತೆ ವಿವಾಧಾತ್ಮಕ ಪೋಸ್ಟ್ ವೀಡಿಯೋ ಸಂದೇಶಗಳನ್ನು ಪೋಸ್ಟ್ ಮಾಡಬೇಡಿ.
• ಯಾವುದೇ ರಾಜಕೀಯ ಹಾಗೂ ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶಗಳನ್ನು ಕಳುಹಿಸುವುದು, ರವಾನಿಸಿದರೆ ಕಠಿಣ ಕ್ರಮಕೈಗೊಳ್ಳಬಹುದು.
• ಸುದ್ದಿಯ ಮೂಲಗಳನ್ನು ತಿಳಿಯದೇ ಅದನ್ನು ಇತರರಿಗೆ ರವಾನಿಸಲು ಹೋಗಬೇಡಿ.
• ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರವು ದೇಶದ ಅತೀ ಗಂಭೀರ ವಿಚಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರುಗಳು ಗಂಭೀರವಾಗಿ ಯೋಚಿಸಿ, ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವಂತಹ ಸಂದೇಶಗಳನ್ನು ಹಾಕಬೇಡಿ.
• ಯಾರಿಂದಲೋ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ಬೇರೆ ಗ್ರೂಪ್ ಗಳಿಗೆ ಮರು ಕಳುಹಿಸುವುದು (Forword) ಕಂಡುಬಂದಲ್ಲಿ, ಸಂದೇಶವನ್ನು ಕಳುಹಿಸಿದ ವ್ಯಕ್ತಿಯ ವಿರುದ್ಧ ಮತ್ತು ಗ್ರೂಪ್ ಅಡ್ಮಿನ್ ವಿರುದ್ಧ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದು.
• ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸ್ ಆ್ಯಪ್ ಗಳಲ್ಲಿ ಈ ವಿಚಾರಕ್ಕೆ ಸಂಬಂಧಿಸಿದ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಯಾವುದೇ ಸಂದೇಶಗಳನ್ನು ಕಳುಹಿಸದಂತೆ ಕಟ್ಟೆಚ್ಚರ ವಹಿಸುವುದು.
• ವಿಚಾರವು ದೇಶದ ಸಾರ್ವಭೌಮತ್ವ ಹಾಗೂ ಸೌಹಾರ್ದತೆಗೆ ನೇರವಾಗಿ ಪರಿಣಾಮ ಬೀರುವಂತಹ ವಿಚಾರವಾದ್ದರಿಂದ ಯಾವುದೇ ತಪ್ಪು ವಿಚಾರಗಳನ್ನು ರವಾನಿಸಬೇಡಿ.
• ನ್ಯಾಯಾಲಯದ ತೀರ್ಪನ್ನು ನಿಂದಿಸಬೇಡಿ. ತೀರ್ಪಿನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಅಭಿಪ್ರಾಯವನ್ನು ಎಲ್ಲೂ ಹಂಚಿಕೊಳ್ಳಬೇಡಿ.
• ತಪ್ಪದೇ ಈ ವಿಚಾರವನ್ನು ಎಲ್ಲರಿಗೂ ತಿಳಿಸಿ ವಿಷಯದ ಬಗ್ಗೆ ಗಮನಹರಿಸಿ ನಿಯಮಗಳ ಹಾಗೂ ಗುಂಪುಗಳ ಸದಾ ಜಾಗರೂಕರಾಗಿ ಇರಿ. ಮಾದರಿ ಸಮಾಜಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.