ಅಯೋಧ್ಯೆ ನದಿಯಲ್ಲಿ ಪತ್ನಿಗೆ ಮುತ್ತು ಕೊಟ್ಟ ಪತಿಗೆ ಥಳಿತ ; ವಿಡಿಯೋ ವೈರಲ್…

12
firstsuddi

ಲಕ್ನೋ : ಉತ್ತರ ಪ್ರದೇಶದ ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಮುತ್ತು ಕೊಟ್ಟಿದ್ದಕ್ಕೆ ಪತಿಯನ್ನ ನಿಂದಿಸಿ ಥಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ, ವ್ಯಕ್ತಿಯನ್ನು ಆತನ ಹೆಂಡತಿಯಿಂದ ಪಕ್ಕಕ್ಕೆ ಎಳೆದೊಯ್ದು ಸುತ್ತಮುತ್ತಲಿನ ಹಲವರು ಪುರುಷರು ಥಳಿಸಿದ್ದಾರೆ. ಅಯೋಧ್ಯೆಯಲ್ಲಿ ಇಂತಹ ಅಸಹ್ಯವನ್ನು ಸಹಿಸುವುದಿಲ್ಲ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಹೆಂಡತಿ ತನ್ನ ಗಂಡನನ್ನು ರಕ್ಷಿಸಲು ಪ್ರಯತ್ನಿಸುತ್ತಾಳೆ. ಆದರೆ ಆಕೆ ಸಹಾಯ ಮಾಡಲು ವಿಫಲಳಾಗುತ್ತಾಳೆ. ಕೊನೆಗೆ ಆ ದಂಪತಿಯನ್ನು ಅಲ್ಲಿದ್ದ ಜನರು ನದಿಯಿಂದ ಹೊರಗೆ ಕಳುಹಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಯೋಧ್ಯಾ ಪೊಲೀಸರು ತಿಳಿಸಿದ್ದಾರೆ.