ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.
ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್‌ಡಿಕೆ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ. ಈ ಆಹ್ವಾನವನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು, ಸಂತೋಷವಾಗಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿದ್ದಾರೆ.
ಇನ್ನೂ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರನ್ನು ಆಹ್ವಾನಿಸಲಾಗಿದೆ. ಸಿನಿಮಾ ತಾರೆಗಳಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ.










