ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು: ಸಿಎಂ ಖಡಕ್ ಸೂಚನೆ.

24

ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಖಡನ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.