ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು.

43

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅಮ್ ಆದ್ಮಿ ಪಕ್ಷದ (ಆಪ್) ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದ್ದು. ದೆಹಲಿ ಮಧ್ಯ ನೀತಿ ಪ್ರಕರಣ ಸಂಬಂಧ ಕೇಂದ್ರೀಯಾ ತನಿಖಾ ದಳ (ಸಿಬಿಐ) ದಾಖಲಿಸಿದ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಕೇಜ್ರಿವಾಲ್. ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿ ದ್ವಿದಸ್ಯ ನ್ಯಾಯಪೀಠ, ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಈಗಾಗಲೇ ಜಾಮೀನು ಸಿಕ್ಕಿರುವುದರಿಂದ ಕೇಜ್ರಿವಾಲ್ ರವರನ್ನು ಕಸ್ಟಡಿಯಲ್ಲಿ ಇಟ್ಟುಕೊಳ್ಳುವುದು ನ್ಯಾಯದ ಅಪಹಾಸ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿತು.

ಕೇಜ್ರಿವಾಲ್ ಬಂಧನ ನ್ಯಾಯಸಮ್ಮತವಲ್ಲ 22 ತಿಂಗಳುಗಳ ಕಾಲ ಅವರನ್ನು ಸಿಬಿಐ ಬಂಧಿಸಿರಲಿಲ್ಲ. ಆದರೆ ಇಡಿ ಪ್ರಕರಣದಲ್ಲಿ ಬಿಡುಗಡೆಯಾದ ಬೆನ್ನಲ್ಲೇ ಸಿಬಿಐ ಬಂಧಿಸಿದ ತುರ್ತು ಕ್ರಮ ಅರ್ಥವಾಗುತ್ತಿಲ್ಲ ಎಂದು ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ಕೇಜ್ರಿವಾಲ್‍ರನ್ನು ಮೊದಲು ಮಾರ್ಚ್ ತಿಂಗಳಿನಲ್ಲಿ ಬಂಧಿಸಿದ್ದು. ಎರಡು ತಿಂಗಳ ಹಿಂದೆ ಇಡಿ ಪ್ರಕರಣದಲಿ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜುಲೈ 12 ರಂದು ಸಿಬಿಐ ಬಂಧಿಸಿದ್ದರಿಂದ ಕೇಜ್ರಿವಾಲ್‍ಗೆ ಜೈಲುವಾಸ ಮುಂದುವರೆದಿತ್ತು. ಇದೀಗ ಆರು ತಿಂಗಳ ಬಳಿಕ ದೆಹಲಿ ಸಿಎಂ ಬಿಡುಗಡೆಯಾಗುತ್ತಿದ್ದಾರೆ.