ಬೆಂಗಳೂರು : ನಿನ್ನೆ ಬೆಂಗಳೂರಿಗೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ರಣಕಹಳೆ ಊದಲಿದ್ದಾರೆ.
ಮುಂಬರುವ 2023ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರು ಪಕ್ಷದ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.










