ಧಾರವಾಡ: ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಇಂದು ನೇಮಕ ಮಾಡಿದೆ.
ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ವರ್ಗಾವಣೆ ಮಾಡಲಾಗಿದೆ. ರೇಣುಕಾ ಕೆ ಸುಕುಮಾರ್ ಅವರು 2011ರ ಐಪಿಎಸ್ ಬ್ಯಾಚ್‍ನ ಅಧಿಕಾರಿಯಾಗಿದ್ದು, ಸದ್ಯ ಗೃಹ ರಕ್ಷಕ ದಳದ ಡೆಪ್ಯುಟಿ ಕಮಾಂಡೆಂಡ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಹಿಂದೆಯೂ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಆಗಿ ಸಹ ಸೇವೆ ಸಲ್ಲಿಸಿದ್ದರು.
ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪ್ರಸಿದ್ಧಿ ಪಡೆದಿರುವ ರೇಣುಕಾ ಅವರು ಶಿಸ್ತಿನ ಸಿಪಾಯಿ ಎಂದೇ ಖ್ಯಾತಿ ಪಡೆದಿದ್ದಾರೆ.










