ಅಶ್ಲೀಲ ವೀಡಿಯೋ ಹರಿಬಿಡುವ ಬೆದರಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು…

63
firstsuddi

ದಾವಣಗೆರೆ: ಅಶ್ಲೀಲ ವೀಡಿಯೋ ಹರಿಬಿಡುವ ಬೆದರಿಕೆಗೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಾಲೆಗೆ ಹೋಗುವ ವೇಳೆ 17 ವರ್ಷದ ವಿದ್ಯಾರ್ಥಿನಿಗೆ ಇಬ್ಬರು ಯುವಕರು ಪರಿಚಯವಾಗಿದ್ದರು. ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿದ ಯುವಕರು ಆಕೆಯ ಅಶ್ಲೀಲ ವೀಡಿಯೋವನ್ನು ಮಾಡಿಕೊಂಡಿದ್ದರು. ಅಲ್ಲದೇ ತಾವು ಕರೆದಾಗ ಬರದಿದ್ದರೇ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದರು.

ಇದರಿಂದ ಮನನೊಂದು ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯ ಬಳಿಕ ಆಕೆಯನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಆರೋಪಿಗಳಿಗೆ ಶಿಕ್ಷೆ ಆಗಲಿ ಎಂಬ ಗಾಯಾಳು ವಿದ್ಯಾರ್ಥಿನಿ ಹೇಳಿಕೆ ವೀಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಸಂಬಂಧ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.