ಅಸ್ವಸ್ಥಗೊಂಡ ಚಾಲಕ- ಡಿವೈಡರ್‌ಗೆ ಡಿಕ್ಕಿಯಾಗಿ ಬಿಎಂಟಿಸಿ ಬಸ್ ಪಲ್ಟಿ…

134
firstsuddi

ಬೆಂಗಳೂರು: ಕರ್ತವ್ಯದಲ್ಲಿದ್ದ ಚಾಲಕ ಅಸ್ವಸ್ಥಗೊಂಡ ಪರಿಣಾಮ ಬಿಎಂಟಿಸಿ ವೋಲ್ವೋ ಬಸ್ ವೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಘಟನೆ ನಗರದ ಪ್ಯಾಲೇಸ್ ಗುಟ್ಟಹಳ್ಳಿಯ ಫ್ಲೈಓವರ್ ಬಳಿ ನಡೆದಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ ಬಿಎಂಟಿಸಿ ವೋಲ್ವೋ ಬಸ್ (ನಂಬರ್ ಏಂ 57 ಜಿ 0237) ಪ್ಯಾಲೇಸ್ ಗುಟ್ಟಹಳ್ಳಿಯ ಫ್ಲೈಓವರ್ ಬಳಿ ಬಂದಾಗ ಚಾಲಕ ತಲೆ ಸುತ್ತಿನಿಂದ ಅಸ್ವಸ್ಥನಾಗಿದ್ದಾನೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅವಘಡದ ವೇಳೆ ಚಾಲಕ ಹಾಗೂ ನಿರ್ವಾಹಕ ಸೇರಿ 13 ಮಂದಿ ಬಸ್ಸಿನಲ್ಲಿದ್ದರು. ಘಟನೆಯಿಂದ ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ತಲೆಗೆ ಪೆಟ್ಟು ಬಿದ್ದಿದೆ.

ಸದಾಶಿವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.