ಹಿಂದುತ್ವದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದಡಿ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಚೇತನ್ ಹಿಂದುತ್ವ ವಿರೋಧಿ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ ಎಂದು ಬರೆದುಕೊಂಡಿದ್ದರು.










