ಬೆಂಗಳೂರು : ಆಗಸ್ಟ್ 19 ರಂದು ‘ವಿಕ್ರಾಂತ್ ರೋಣ’ ಸಿನಿಮಾ ಬಿಡುಗಡೆಗೊಳ್ಳುತ್ತಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಕೊರೊನಾ ಸಮಸ್ಯೆಯ ನಡುವೆಯೂ ವಿಕ್ರಾಂತ್ ರೋಣ ಸಿನಿಮಾ ಚಿತ್ರತಂಡ ಈ ನಿರ್ಧಾರ ಕೈಗೊಂಡಿದೆ. ಈ ವಿಚಾರವನ್ನು ಕಿಚ್ಚ ಸುದೀಪ್ ಅವರು ತಮ್ಮ ಟ್ವೀಟರ್ ಮೂಲಕ ತಿಳಿಸಿದ್ದಾರೆ.
‘ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ಧತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ ರೋಮಾಂಚನಕಾರಿ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ. ವಿಕ್ರಾಂತ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ’. ಎಂದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ *ರೋಮಾಂಚನಕಾರಿ* ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ!
ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ.#VikrantRona
🤗 pic.twitter.com/uRbdLpHlB2— Kichcha Sudeepa (@KicchaSudeep) April 15, 2021
ಇನ್ನೂ ದುಬೈನ ಬುರ್ಜ್ ಖಲೀಫಾದ 148ನೇ ಮಹಡಿಯಲ್ಲಿ ಟೈಟಲ್ ಲೋಗೋ ಲಾಂಚ್ ಮಾಡಲಾಗಿತ್ತು. ಇದೀಗ ಆಗಸ್ಟ್ 19 ರಂದು ಭಾರತದಾದ್ಯಂತ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಆಗಲಿದೆ.










