ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಪ್ರಪಾತದ ತುದಿಯಲ್ಲಿ ನಿಂತಿರುವ ಘಟನೆ ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಸಂಭವಿಸಿದೆ.
ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಶಿವಮೊಗ್ಗದಿಂದ ಹೆಬ್ರಿಗೆ ಭತ್ತ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಆಗುಂಬೆ ಘಾಟ್ ರಸ್ತೆಯ 6 ಮತ್ತು 7ನೇ ತಿರುವಿನ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆಗೊಡೆಗೆ ಡಿಕ್ಕಿ ಹೊಡೆದು ಪ್ರಪಾತದತ್ತ ವಾಲಿ ನಿಂತಿದೆ. ಅದೃಷ್ಟವಶಾತ್ ಯವುದೇ ಅನಾಹುತ ಸಂಭವಿಸಿಲ್ಲ. ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯವಾಗಿದೆ. ಅಪಘಾತದಿಂದಾಗಿ ಕೆಲಕಾಲ ಘಾಟಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು.
ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










