ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿ.ಪಿ. ಬಜಾರದಲ್ಲಿ ನಡೆದಿದೆ.
ಅನುಶ್ರೀ ರಾಜಶೇಖರ ಶೆಟ್ಟರ್ (2) ಮೃತ ಬಾಲಕಿ. ಈಕೆ ಬಾವಿ ಸಮೀಪ ಆಟವಾಡುತ್ತ ನೇರವಾಗಿ ಬಾವಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಾಯಿ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರಾದ ಶಂಭು ಶೆಂಮಡಿ ಎಂಬವರು ಕೂಡಲೇ ಬಾವಿಗೆ ಇಳಿದು ಬಾಲಕಿಯನ್ನು ಹೊರಕ್ಕೆ ತೆಗೆದಿದ್ದಾರೆ. ಆದರೆ ಆಕೆ ಬಾವಿಯಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.
ಘಟನಾ ಸ್ಥಳಕ್ಕೆ ನಗರಠಾಣೆ ಪಿಎಸ್ಐ ರಾಜಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










