ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ-ಇಬ್ಬರು ಕೂಲಿ ಕಾರ್ಮಿಕರು ಸಾವು, ಐವರಿಗೆ ಗಂಭೀರ ಗಾಯ…

118
firstsuddi

ಹುಬ್ಬಳ್ಳಿ : ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ಮೃತರು ಆಟೋದಲ್ಲಿ ಒಟ್ಟು 8 ಮಂದಿ ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರ್ಯಾಕ್ಟರ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಲಘಟಗಿ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.