ಆಡಿಯೋ ಬಿಡುಗಡೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ : ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಉಮೇಶ್ ಕತ್ತಿ ಮನವಿ…

209
firstsuddi

ಬೆಂಗಳೂರು : ಮುಖ್ಯಮಮತ್ರಿ ಬಿ.ಎಸ್. ಯಡಿಯೂರಪ್ಪ ಆಡಿಯೋ ಬಿಡುಗಡೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ ಎಂದು ಮಾಜಿ ಸಚಿವ ಉಮೇಶ್ ಕತ್ತಿ ಅವರು ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿಯಾದ ಮಾಜಿ ಸಚಿವ ಉಮೇಶ್ ಕತ್ತಿ ಅವರು, ಸುಮಾರು ಒಂದು ಗಂಟೆಗಳ ಕಾಲ ಬಿಎಸ್‌ವೈ ಅವರ ಬಳಿ ಚರ್ಚೆ ನಡೆಸಿದರು. ಈ ವೇಳೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಆಡಿಯೋ ಬಿಡುಗಡೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ. ಅವರು ಯಾರ ಕಡೆಯವರೇ ಆಗಲಿ ಅವರನ್ನು ಸುಮ್ಮನೆ ಬಿಡಬಾರದು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.