ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡದಿದ್ದರೆ ಈ ಯೋಜನೆ ಯಾವ ಪುರುಷಾರ್ಥಕ್ಕೆ : ಹೆಚ್ ಡಿಕೆ ಟ್ವೀಟ್…

143
firstsuddi

ಬೆಂಗಳೂರು : ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇ. 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ ಎಂದಿದ್ದಾರೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೊನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.